UK Suddi
The news is by your side.

ಪದ್ಮಾವತಿ ಕಾಟನ್ ಇಂಡಸ್ಟ್ರಿ ಉದ್ಘಾಟಿಸಿದ ಬಿ ಎಸ್ ಯಡಿಯೂರಪ್ಪ

ಧಾರವಾಡ: ನಿನ್ನೆ ಸಂಜೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಧಾರವಾಡದಲ್ಲಿ ಉಪ್ಪಿನ ಬೇಟಗೆರಿಯ ತವನಪ್ಪ ಪಾಯಪ್ಪ ಅಷ್ಟಗಿಯವರ ಪದ್ಮಾವತಿ ಕಾಟನ್ ಇಂಡಸ್ಟ್ರೀಸ್ ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಪದ್ಮಾವತಿ ಕಾಟನ್ ಇಂಡಸ್ಟ್ರಿ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಧಾರವಾಡದ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಮೂರು ಸಾವಿರ ವಿರಕ್ತ ಮಠದ ಶ್ರೀ ವಿರೂಪಾಕ್ಷ ಮಹಾಸ್ವಾಮಿಗಳು ವಹಿಸಿದ್ದರು, ಮಾಜಿ ಮುಖ್ಯಮಂತ್ರಿಗಳಾದ  ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಶಿ ಮುಂತಾದ ಮುಖಂಡರು ಸಮಾರಂಭದಲ್ಲಿ ಭಾಗವಹಿಸಿದ್ದರು.

Comments