UK Suddi
The news is by your side.

ನೋಟು ರದ್ದು ನಿರ್ಧಾರ ಬೆಂಬಲಿಸಿದ ಜನತೆಗೆ ಧನ್ಯವಾದ ಹೇಳಿದ ಪ್ರಧಾನಿ

ನವದೆಹಲಿ: ಕಳೆದ ವರ್ಷ ನವೆಂಬರ್ 8ರಂದು ಪ್ರಕಟಿಸಿದ್ದ ದೊಡ್ಡ ಮುಖಬೆಲೆಯ ನೋಟು ರದ್ದು ನಿರ್ಧಾರವನ್ನು ಬೆಂಬಲಿಸಿದ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಮರ್ಪಿಸಿದ್ದಾರೆ.

ಬುಧವಾರ ಬೆಳಿಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ‘ನಿರ್ಣಾಯಕ ಯುದ್ಧದಲ್ಲಿ ಹೋರಾಡಿ 125 ಕೋಟಿ ಭಾರತೀಯರು ಜಯ ಗಳಿಸಿದ್ದಾರೆ’ ಎಂದು ಹೇಳಿದ್ದಾರೆ.

Comments