UK Suddi
The news is by your side.

ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ಯುವಕನಮೇಲೆ ಡಿ.ಕೆ.ಶಿವಕುಮಾರ್ ಕೆಂಡಾಮಂಡಲ

ಬೆಳಗಾವಿ: ಸೆಲ್ಫಿ ತೆಗೆದುಕೊಳ್ಳಲು ಯತ್ನ ನಡೆಸಿದ್ದ ಯುವಕನೊಬ್ಬನ ಸಚಿವ ಡಿ.ಕೆ.ಶಿವಕುಮಾರ್ ಕೆಂಡಾಮಂಡಲಗೊಂಡಿರುವ ಘಟನೆ ಸೋಮವಾರ ನಡೆದಿದೆ. 

ಡಿ.ಕೆ.ಶಿವಕುಮಾರ್ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಹತ್ತಿರ ಬಂದಿರುವ ಯುವಕನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಯತ್ನ ನಡೆಸಿದ್ದ. ಇದರಿಂದ ಡಿ.ಕೆ. ಶಿವಕುಮಾರ್ ಅವರು ಕೆಂಡಾಮಂಡಲಗೊಂಡಿದ್ದಾರೆ. 

ಬಳಿಕ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಸಾಮಾನ್ಯ ಪರಿಜ್ಞಾನವೆಂಬುದು ಇರಬೇಕು. ಮಾಧ್ಯಮಗಳೊಂದಿಗೆ ಮಾತನಾಡುತ್ತಾ ನಾನು ನನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಬಂದು ಸೆಲ್ಫಿ ಹೇಗೆ ಕ್ಲಿಕ್ಕಿಸುತ್ತಾನೆ? ಇದೆಲ್ಲಾ ಸಾಮಾನ್ಯ ಪ್ರಕರಣಗಳು ಎಂದು ಹೇಳಿದರು. 

Comments