ಬೀದರನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಆರಂಭಿಸಿದ ಬಿ ಎಸ್ ವೈ.
ಬೀದರ:ಬಿಜೆಪಿ ಪರಿವರ್ತನಾ ಯಾತ್ರೆಯ 36ನೇ ದಿನವಾದ ಇಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಔರಾದನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತು ತೀವ್ರ ವಾಗ್ದಾಳಿ ನಡೆಸಿದರು. ಒಂದೂ ಕಪ್ಪು ಚುಕ್ಕೆ ಇಲ್ಲವೆಂದು ಹೇಳುವ ಸಿದ್ದರಾಮಯ್ಯನವರು ಹಗರಣಗಳ ಸರಮಾಲೆಯನ್ನೇ ತೊಟ್ಟಿದ್ದಾರೆಂದು ಆರೊಪಿಸಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಭಗವಂತ್ ಖೂಬಾ,ಅರವಿಂದ್ ಲಿಂಬಾವಳಿ,ಪ್ರಭು ಚವಾಣ್ ಮತ್ತಿತರರು ಪಾಲ್ಗೊಂಡಿದ್ದರು.