ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಶನಿವಾರ ಪ್ರಕಟಿಸಿದೆ. ಡಿ. 29ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
2017-18ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಕರಡು ನಿಯಮಗಳನ್ನು ಶಿಕ್ಷಣ ಇಲಾಖೆ ಸೆ.7ರಂದು ಬಿಡುಗಡೆ ಮಾಡಿತ್ತು. ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ಕಲ್ಪಿಸಿತ್ತು. ಐದು ಸಾವಿರಕ್ಕೂ ಹೆಚ್ಚಿನ ಆಕ್ಷೇಪಣೆ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆಕ್ಷೇಪಣೆಗೆ ಪ್ರತಿಕ್ರಿಯಿಸಿದ್ದ ಇಲಾಖೆಯು ತಾಲೂಕು ಮಟ್ಟದ ವರ್ಗಾವಣೆಯನ್ನು ಶೇ.15ರಿಂದ 20ಕ್ಕೆ ಏರಿಕೆ ಮಾಡಿತ್ತು. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆಯು ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.
ಅರ್ಜಿಗಳೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದ್ದು.
ವರ್ಗಾವಣೆ ಪ್ರಕ್ರಿಯೆ ಹಾಗೂ ದಾಖಲೆಗಳನ್ನು ಸಲ್ಲಿಸುವ ಕುರಿತ ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್ಸೈಟ್ ನೋಡಬಹುದು. ಹೆಚ್ಚಿನ ಮಾಹಿತಿಗೆ http://schooleducation.kar.nic.in/ ಸಂಪರ್ಕಿಸಬಹುದು.