UK Suddi
The news is by your side.

ಹಿಂದು ಯುವಕರ ಹತ್ಯೆ ಖಂಡಿಸಿ ಪ್ರತಿಭಟನೆ.

ಬೆಳಗಾವಿ: ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗು ಅಖಿಲ ಭಾರತ ವಿಧ್ಯಾರ್ಥಿ ಪರಿಷತನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.


ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
‘ರಾಜ್ಯದಲ್ಲಿ ನಾಲ್ಕೂವರೆ ವರ್ಷಗಳಲ್ಲಿ ವಿವಿಧ ಹಿಂದೂ ಸಂಘಟನೆಗಳಿಗೆ ಸೇರಿದ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬರ್ಬರವಾಗಿ ಹತ್ಯೆ ನಡೆದಿರುವುದು ಆಘಾತಕಾರಿ ಸಂಗತಿಯಾಗಿದೆ. ರಾಜ್ಯದಾದ್ಯಂತ ನಡೆದಿರುವ ಎಲ್ಲ ಹಿಂದೂ ಕಾರ್ಯಕರ್ತರ ಹತ್ಯೆ ಒಂದೇ ಮಾದರಿಯಲ್ಲಿ ಇವೆ’  ಎಂದು ಪ್ರತಿಭಟನಾಕಾರರು ಆರೋಪಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಶ್ವನಾಥ ಪಾಟೀಲ ‘ಹಿಂದೂ ಕಾರ್ಯಕರ್ತರು ಮತ್ತು ಮುಖಂಡರಿಗೆ ಜೀವಭದ್ರತೆ ಒದಗಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಹತ್ಯಾಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೂರುಸಾವಿರ ಮಠದ ಶ್ರೀಗಳು,ವಿಶ್ವ ಹಿಂದೂ ಪರಿಷತ್ ಸದಸ್ಯರು,ಅಖಿಲ ಭಾರತ ವಿಧ್ಯಾರ್ಥಿ ಪರಿಷತ್ ಸದಸ್ಯರು,ಮಹಾಂತೇಶ ದೊಡಗೌಡರ,ನಗರದ ಗಣ್ಯರು ಸೇರಿದಂತೆ ಅನೇಕ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Comments