UK Suddi
The news is by your side.

16 ವಸತಿ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ

ಹುಬ್ಬಳ್ಳಿ: ಪ್ರತಿಯೊಬ್ಬರಿಗೂ ಉನ್ನತ ಶಿಕ್ಷಣದ ಉದ್ದೇಶದಿಂದ ರಾಜ್ಯಾದ್ಯಂತ ವಸತಿ ಕಾಲೇಜು ಆರಂಭಕ್ಕೆ ತೀರ್ಮಾ ನಿಸಿದ್ದು, ಸದ್ಯ 16 ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ದೊರಕಿದೆ. ಇದರಲ್ಲಿ ಹತ್ತು ಕಾಲೇಜುಗಳ ಕಟ್ಟಡ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.

ಧಾರವಾಡ ಜಿಲ್ಲಾ ವ್ಯಾಪ್ತಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳ ಪ.ಜಾ/ಪ.ಪ ವಿದ್ಯಾರ್ಥಿಗಳಿಗೆ ಉಚಿತ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ,  ಮೊದಲ ಹಂತದಲ್ಲಿ 16 ವಸತಿ ಕಾಲೇಜು ಸ್ಥಾಪನೆಗೆ ತೀರ್ಮಾನಿಸಿ, 10 ಕಾಲೇಜುಗಳಿಗೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಪ್ರತಿಯೊಂದು ಕಾಲೇಜಿಗೂ 25 ಕೋಟಿ ರು. ವೆಚ್ಚ ಮಾಡಲಾಗುತ್ತಿದ್ದು, ಅಗತ್ಯಬಿದ್ದರೆ ರಾಜ್ಯ ಸರಕಾರ ಮತ್ತಷ್ಟು ಅನುದಾನ ನೀಡಲಿದೆ. ರಾಯಚೂರು, ಬೀದರ, ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲಿ ಈ ಕಾಲೇಜುಗಳು ಆರಂಭವಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ತಾಲೂಕು ಕೇಂದ್ರಗಳಲ್ಲೂ ವಸತಿ ಕಾಲೇಜು ಆರಂಭಿಸಲಾಗುತ್ತದೆ ಎಂದರು.

Comments