ಸಿದ್ದರಾಮಯ್ಯನವರು ಅನುದಾನವೇ ಇಲ್ಲದೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ:ಬಿ ಎಸ್ ಯಡಿಯೂರಪ್ಪ.
ಬೆಂಗಳೂರು:ರಾಜಧಾನಿಯಲ್ಲಿ ಪರಿವರ್ತನೆಯ ಮಹಾಪರ್ವ ಈಗಾಗಲೇ ಆರಂಭವಾಗಿದೆ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಿಜಯನಗರದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಉತ್ತರ ಪ್ರದೇಶದಲ್ಲಿ ಹೇಳ ಹೆಸರಿಲ್ಲದಂತೆ ನೆಲಕಚ್ಚಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ರಾಜ್ಯವನ್ನು ದಿವಾಳಿ ಸ್ಥಿತಿಗೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುದಾನವೇ ಇಲ್ಲದೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಪರರಾಜ್ಯದವರ ಅನೇಕ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಭ್ರಷ್ಟಾಚಾರವೆಸಗುತ್ತಿದ್ದಾರೆ. ಬೆಂಗಳೂರಿನ ಮಹಾಜನತೆ ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಪ್ರಕಾಶ್ ಜಾವ್ಡೇಕರ್, ಅನಂತ್ ಕುಮಾರ್, ಸದಾನಂದ ಗೌಡ, ಶೋಭಾ ಕರಂದ್ಲಾಜೆ,ಆರ್. ಅಶೋಕ್,ಈಶ್ವರಪ್ಪ, ಜಗದೀಶ್ ಶೆಟ್ಟರ್,ವಿ ಸೋಮಣ್ಣ,ಅಶ್ವಥ್ ನಾರಾಯಣ್, ಸುರೇಶ್ ಕುಮಾರ್ ಮುಂತಾದವರು ಸಮಾವೇಶದಲ್ಲಿ ಭಾಗವಹಿಸಿದ್ದರು.