UK Suddi
The news is by your side.

ಪ್ರತಿಯೊಬ್ಬರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು:ಡಾ.ವಿಶ್ವನಾಥ ಪಾಟೀಲ.

ಬೈಲಹೊಂಗಲ:ಕೇವಲ 39 ವರ್ಷ ಜೀವಿ­ಸಿದರೂ ಅದ್ಭುತ ವಾಕ್ಚಾತುರ್ಯ ಮತ್ತು ತತ್ವಜ್ಞಾನದ ಮೂಲಕ ಭಾರತೀಯ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಶಾಸಕರಾದ ಡಾ.ವಿಶ್ವನಾಥ ಪಾಟೀಲ ಅಭಿಪ್ರಾಯಪಟ್ಟರು.
ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಬೈಲಹೊಂಗಲ ನಗರದಲ್ಲಿ ಏರ್ಪಡಿಸಲಾಗಿದ್ದ “ರಾಷ್ಟ್ರೀಯ ಯುವ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿವೇಕಾನಂದ ಅವರಂತಹ ಮೇರು ವ್ಯಕ್ತಿತ್ವದವರು ಯುವ ಪೀಳಿಗೆಯ ಭವಿಷ್ಯ ನಿರ್ಮಾಣದಲ್ಲಿ ಸ್ಫೂರ್ತಿದಾಯಕ ಪ್ರತಿಯೊಬ್ಬ ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವೇಕ ಬ್ಯಾಂಡ್ ಮತ್ತು ರಾಷ್ಟ್ರ ಜಾಗೃತಿ ಪುಸ್ತಕಗಳನ್ನು ವಿತರಿಸಲಾಯಿತು.

ಕಾಲೇಜು ವಿದ್ಯಾರ್ಥಿಗಳು,ಸಾರ್ವಜನಿಕರು, ಯುವ ಮೋರ್ಚಾ ಸದಸ್ಯರು, ಬಿಜೆಪಿ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.

-ಗುರು ಎಸ್ ಎ.

Comments