UK Suddi
The news is by your side.

ಜ.24ರಂದು ಡಾ.ಮಲ್ಲಿಕಾರ್ಜುನ ಮನಸೂರ ಕಲಾಭವನದ ಮೈದಾನದಲ್ಲಿ ಗಾನ-ಯಾನ  ಸಂಗೀತ ರಸಮಂಜರಿ ಕಾರ್ಯಕ್ರಮ.

ಧಾರವಾಡ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿಯ ಸಹಯೋಗದೊಂದಿಗೆ ಕನ್ನಡ ಚಲನಚಿತ್ರ ಗೀತೆಗಳನ್ನು ಒಳಗೊಂಡ ಗಾನ-ಯಾನ ರಸಮಂಜರಿ ಕಾರ್ಯಕ್ರಮವನ್ನು ಜ. 24 ರಂದು ಸಂಜೆ 6 ಗಂಟೆಗೆ ನಗರದ ಡಾ.ಮಲ್ಲಿಕಾರ್ಜುನ ಮನಸೂರ ಕಲಾಭವನದ ಆವರಣದಲ್ಲಿ ಆಯೋಜಿಸಿದ್ದು, ಕನ್ನಡದ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಬೆಂಗಳೂರಿನ ಸಂಗೀತಾ ರವೀಂದ್ರನಾಥ್ ಅವರ ತಂಡವು ಗಾನಯಾನ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದೆ.
ಬೆಂಗಳೂರಿನ ಖ್ಯಾತ ಹಿನ್ನೆಲೆ ಗಾಯಕಿ ಸಂಗೀತಾ ರವೀಂದ್ರನಾಥ್ ತಂಡದವರು ಗಾನಯಾನ ಕಾರ್ಯಕ್ರಮ ನಡೆಸಿಕೊಡಲಿದ್ದು, ಹಲವು ಉದಯೋನ್ಮುಖ ಗಾಯಕರು ಸಾಮಾಜಿಕ ಸಮಾನತೆಯ ಬಗ್ಗೆ ಸರ್ವಕಾಲಿಕ ಜನಪ್ರಿಯ ಕನ್ನಡ ಚಲನಚಿತ್ರಗಳ ಹಾಡುಗಳನ್ನು ಹಾಡಿ ರಂಜಿಸಲಿದ್ದಾರೆ.  

ಪ್ರವೇಶ ಉಚಿತವಾಗಿದ್ದು, ಕನ್ನಡ ಅಭಿಮಾನಿಗಳು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು, ಕನ್ನಡೋಪಾಸಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. 

Comments