UK Suddi
The news is by your side.

ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ಧತೆ ‘ಪೋನ್ ಇನ್ ನೇರ ಕಾರ್ಯಕ್ರಮ’ ಸರಣಿ ಕಾರ್ಯಕ್ರಮ

ಧಾರವಾಡ: ಜಿಲ್ಲೆಯು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಸುಧಾರಣೆಯಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ನಿರಂತರವಾಗಿ ಉತ್ತಮ ಸಾಧನೆ ಮಾಡುತ್ತಿದೆ. ಈ ಬಾರಿ ತನ್ನ ಸಾಧನೆಯನ್ನು ಇನ್ನಷ್ಟು ಉತ್ತಮ ಪಡಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯು ವೈಶುದೀಪ್ ಫೌಂಡೇಷನ್ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಪ್ರಯತ್ನಗಳನ್ನು ಈಗಾಗಲೇ ಆರಂಭಿಸಿದೆ.
ಇಲ್ಲಿನ ಸನ್ಮತಿ ಮಾರ್ಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪ್ರತಿ ಸೋಮವಾರ ಸಾಯಂಕಾಲ 6 ರಿಂದ 8 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮದ ಮೂಲಕ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಲ್ಲಿನ ಸಂದೇಹಗಳನ್ನು ಪರಿಹರಿಸುತ್ತಿದ್ದಾರೆ. ಕಳೆದ 12 ವರ್ಷಗಳಿಂದ ಈ ಕಾರ್ಯಕ್ರಮ ನಡೆಯುತ್ತಿದೆ.

ಪ್ರತಿ ವಾರ ಪ್ರತಿ ವಿಷಯಕ್ಕೆ ಸಂಬಂಧಿಸಿದಂತೆ ತಲಾ 3 ಜನರಂತೆ ಒಟ್ಟು 15 ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ಒದಗಿಸುತ್ತಾರೆ. ಕಳೆದ ಸೋಮವಾರ ಜ.22 ರಂದು ಕಿರೇಸೂರಿನ ಶಿಕ್ಷಕ ಎ.ಎಫ.ಈರಗಾರ ಸೇರಿದಂತೆ ಹಲವು ಸಂಪನ್ಮೂಲ ವ್ಯಕ್ತಿಗಳು ಸುಮಾರು 150 ಪ್ರಶ್ನೆಗಳಿಗೆ ಉತ್ತರಿಸಿದರು. ಪರೀಕ್ಷೆ ಆರಂಭವಾಗುವವರೆಗೂ ಈ ಕಾರ್ಯಕ್ರಮ ಮುಂದುವರೆಯಲಿದ್ದು, ವಿದ್ಯಾರ್ಥಿಗಳು 18004255540 ದೂರವಾಣಿ ಸಂಖ್ಯೆ ಮೂಲಕ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್.ನಾಗೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments