UK Suddi
The news is by your side.

ಗದಗ:ಬೊಲೆರೋ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು.

ಗದಗ:ಬೊಲೆರೋ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಜಬ್ಬರ್(೩೦) ಎಂಬಾತ ಚಾಲಕ ಮೃತಪಟ್ಟಿದ್ದಾನೆ.
ಮುಂಬದಿಯ ಟೈರ್ ಬ್ಲಾಸ್ಟ್ ಆಗಿ ರಸ್ತೆ ಪಕ್ಕದ ಕಲ್ಲಿಗೆ ಗುದ್ದಿ ವಾಹನ ಮೂರು ಪಲ್ಟಿ ಆಗಿದೆ.ಬೊಲೆರೋ ವಾಹನ ಸಂಪೂರ್ಣ ನುಜ್ಜು ಗುಜ್ಜಾಗಿದೆ.
ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments