ಕರ್ನಾಟಕ ಬಂದ್; ಬೆಳಗಾವಿಯಲ್ಲಿ ಸ್ಥಗಿತಗೊಂಡ ಬಸ್ ಸೇವೆ
ಬೆಳಗಾವಿ: ಮಹದಾಯಿ ಇತ್ಯರ್ಥಕ್ಕಾಗಿ ಪ್ರದಾನಮಂತ್ರಿ ಅವರು ಮಧ್ಯಸ್ಥಿಕೆ ವಹಿಸಬೇಕೆಂದು ಕನ್ನಡ ಪರ ಸಂಘಟನೆಗಳು ನೀಡಿದ ಕರ್ನಾಟಕ ಬಂದ್ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಬಸ್ ಸೇವೆ ಸ್ಥಗಿತಗೋಂಡಿತ್ತು.
ಬಂದ್ ಕರೆ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ನಗರದಲ್ಲಿ ತುಸು ವ್ಯತ್ಯಾಸ ಉಂಟಾಯಿತು. ಬೆಳಗ್ಗೆ ಪ್ರತಿಭಟನಾಕಾರರು ಬಸ್ ನಿಲ್ದಾಣದ ಬಳಿಯೇ ಪ್ರತಿಭನೆ ನಡೆಸಿದ್ದರಿಂದ ನಗರ ಸಾರಿಗೆ ಬಸ್ಗಳ ಸಂಚಾರ ನಿಲ್ಲಿಸಲಾಗಿತ್ತು. ಬೆಳಿಗ್ಗೆಯಿಂದಲೇ ಗೋವಾ, ಮಹಾರಾಷ್ಟ್ರ ಹಾಗೂ ರಾಜ್ಯದ ವಿವಿಧ ಭಾಗಕ್ಕೆ ತೆರಳುವ ಬಸ್ ಸೇವೆ ಸಂಪೂರ್ಣ ಬಂದ್ ಆಗಿದ್ದವು, ಜಿಲ್ಲೆಯ ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಬಂದ್ಗೆ ಕನ್ನಡ ಪರ ಮತ್ತು ರೈತ ಸಂಘಟನೆಗಳಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.
ಕೃಷಿಕ ಸಮಾಜ, ರೈತ ಸಂಘ ಹಾಗೂ ಕನ್ನಡ ಪರ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನಾಕಾರರು ರಾಜ್ಯ,ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಅಂಗಡಿ, ಮುಂಗಟ್ಟುಗಳನ್ನು ಬಂದ್ ಆಗಿದ್ದವು.