UK Suddi
The news is by your side.

ಕಾಂಗ್ರೆಸ್ಸನ್ನು ಸೋಲಿಸುವ ಮೂಲಕ ದೇಶವನ್ನು ಕಾಂಗ್ರೆಸ್‌ ಮುಕ್ತವಾಗಿಸಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು: ಸಿದ್ದು ಸವದಿ

ರಬಕವಿ: ಮುಂಬರುವ ವಿಧಾನಸಭೆ ಚುನಾವಣೆ ಪರಿವರ್ತನೆಗೆ ಕಾರಣವಾಗಲಿದೆ ಎಂದು ಬಾಗಲಕೋಟ ಬಿಜೆಪಿ ಜಿಲ್ಲಾಧ್ಯಕ್ಷ,ಮಾಜಿ ಶಾಸಕ ಸಿದ್ದು ಸವದಿ ಅಭಿಪ್ರಾಯ ಪಟ್ಟರು.

ರಬಕವಿಯ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ನಡೆದ ತೇರದಾಳ ಮತಕ್ಷೇತ್ರದ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಎಲ್ಲ ರಾಜ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್‌ ರಾಜ್ಯದಲ್ಲಿ ಮಾತ್ರ ಗುಟುಕು ಜೀವ ಉಳಿಸಿಕೊಂಡಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸುವ ಮೂಲಕ ದೇಶವನ್ನು ಕಾಂಗ್ರೆಸ್‌ ಮುಕ್ತವಾಗಿಸಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕೆಂದರು.

ಒಂದು ವರ್ಗವನ್ನು ತುಷ್ಟೀಕರಣ ಮಾಡುತ್ತಾ ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ಸನ್ನು ಸೋಲಿಸಬೇಕು. ವಿಧಾನಸಭೆಗೆ ಕೆಲವೇ ತಿಂಗಳಲ್ಲಿ ಚುನಾವಣೆ ಎದುರಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈಗಾಗಲೆ ಬಿಜೆಪಿ ಅಲೆ ಸೃಷ್ಟಿಯಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಮತ್ತಷ್ಟು ಸಕ್ರೀಯರಾಗಬೇಕು ಎಂದರು.
ಈ ಸಂದರ್ಭದಲ್ಲಿ ಪಕ್ಷದ ಎಲ್ಲ ಪದಾಧಿಕಾರಿಗಳು, ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Comments