UK Suddi
The news is by your side.

KSRTC ಪ್ರಯಾಣ ದರ ಶೇ.10 ರಷ್ಟು ಇಳಿಸಲು ಸಿಎಂ ಅವರಿಗೆ ಮನವಿ ಸಲ್ಲಿಸಲಾಗುವುದು: ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ

ಬೆಂಗಳೂರು: ಕೆಎಸ್‌ಆರ್‌ಟಿಸಿ ಪ್ರಯಾಣ ದರವನ್ನು ಶೇ.10 ರಷ್ಟು ಇಳಿಸಲು ಸಿಎಂ  ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 4 ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಆದರೂ ಪ್ರಯಾಣಿಕರ ಹಿತದೃಷ್ಟಿಯಿಂದ ಪ್ರಯಾಣ ದರ ಇಳಿಸಲು ಕೋರಲಾಗುವುದು ಎಂದು ಹೇಳಿದರು. ಬಜೆಟ್‌ ಕುರಿತು ಭಾನುವಾರ ಮುಖ್ಯಮಂತ್ರಿ ಸಭೆ ಕರೆದಿದ್ದಾರೆ. ಈ ಬಗ್ಗೆ ನಾನು ಇಲಾಖೆ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸಿದ್ದೇನೆ. ಸಭೆಯಲ್ಲಿ ಪ್ರಯಾಣ ದರ ಇಳಿಕೆಗೆ ಮನವಿ ಮಾಡಲಾಗುವುದು ಎಂದರು.

ಈ ಬಾರಿಯ ಬಜೆಟ್‌ನಲ್ಲಿ ಹಲವು  ಯೋಜನೆ ಪ್ರಕಟಿಸಲು ತೀರ್ಮಾನಿಸಲಾಗಿದ್ದು, ಸಾರಿಗೆ ಇಲಾಖೆಗೆ 1000 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಡಲು ಬೇಡಿಕೆ ಇಡಲಾಗುವುದು ಎಂದು ಹೇಳಿದರು.

Comments