UK Suddi
The news is by your side.

ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ : ಸತೀಶ ಜಾರಕಿಹೊಳಿ.

ಧಾರವಾಡ: ರಾಜ್ಯದಲ್ಲಿ ಜ್ಯಾತ್ಯಾತೀತ ಶಕ್ತಿಯನ್ನು ಬಲಗೊಳಿಸುವ ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನಮ್ಮ ಮುಂದಿನ ಗುರಿಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.
ಧಾರವಾಡ ನೌಕರರ ಭವನದಲ್ಲಿ ಅನೀಶ್ ಚಿಂಚೋರೆ ಮೇಮೋರಿಯಲ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಆಟೋರಿಕ್ಷಾಗಳ ವಿತರಣೆ ಹಾಗೂ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ 74ರ ಬೂತ್ ಮಟ್ಟದ ಅಧ್ಯಕ್ಷರ ಸಲಹೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ಅನೀಶ್ ಚಿಂಚೋರೆ ಮೇಮೋರಿಯಲ್ ಫೌಂಡೇಶನ್ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ದೀಪಕ ಚಿಂಚೋರೆ ಅವರ ಸಾಮಾಜಿಕ ಕಳಕಳಿ ಇತರರಿಗೆ ಮಾದರಿಯಾಗಿದ್ದು, ಅವರ ರಾಜಕೀಯ ಜೀವನ ಹಾಗೂ ಬಡವರ ಬಗ್ಗೆ ಹೊಂದಿರುವ ಕಾಳಜಿಯನ್ನು ಕಳೆದ ಹಲವು ವರ್ಷಗಳಿಂದ ನೋಡುತ್ತಾ ಬಂದಿದ್ದೇನೆ.

ಇದು ನಿಜವಾಗಿಯೂ ಹೆಮ್ಮೆಯ ಸಂಗತಿಯಾಗಿದ್ದು, ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಎಂದರು.
ಬರುವ ದಿನಗಳಲ್ಲಿ ಚುನಾವಣೆ ತಂತ್ರವನ್ನು ಇನ್ನಷ್ಟು ರೂಪಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸೋಣ. ಮುಂದಿನ ದಿನಗಳಲ್ಲಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಹಾಗೂ ಬಡವರ ಪರ ಕಾಂಗ್ರೆಸ್ ಬಾವುಟವನ್ನು ಮತ್ತೆ ರಾಜ್ಯದಲ್ಲಿ ಹಾರಿಸೋಣ ಎಂದರು.

Comments