ಬೈಲಹೊಂಗಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರವಾಗಿದೆ; ಶಾಸಕ ವಿಶ್ವನಾಥ ಪಾಟೀಲ
ಬೈಲಹೊಂಗಲ: “ಬೈಲಹೊಂಗಲ ಭಾಗದ ಜನರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರವಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮಹಿಳಾ ಸ್ವ ಸಹಾಯ ಸಂಘದಿಂದ ಮಹಿಳೆಯರಿಗೆ ಉದ್ಯೋಗಾವಕಾಶ ದೊರಕಿದೆ,ಮಹಿಳೆಯರು ಆರ್ಥಿಕವಾಗಿ ಸದ್ರಡರಾಗಿದ್ದಾರೆ” ಎಂದು ಶಾಸಕ ವಿಶ್ವನಾಥ ಪಾಟೀಲ ಅಭಿಪ್ರಾಯ ಪಟ್ಟರು.
ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ. ಹೇಮಾವತಿ ವೀ. ಹೆಗ್ಗಡರಯವರ ಮಾರ್ಗದರ್ಶನ ಹಾಗೂ ಆರ್ಥಿಕ ಸಹಕಾರದೊಂದಿಗೆ “ನಮ್ಮ ಊರು ನಮ್ಮ ಕೆರೆ” ಕಾರ್ಯಕ್ರಮದಡಿ ಪುನಃಶ್ಚೇತನಗೊಳಿಸಿದ ಬೈಲಹೊಂಗಲ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಆನಿಗೋಳ ಗ್ರಾಮದ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗಿವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ “ಗ್ರಾಮಗಳಿಗೆ ಕೆರೆಗಳು ಅತಿ ಅವಶ್ಯಕ,ಕೆರೆಗಳನ್ನು ಸ್ವಚ್ಛವಾಗಿ ಇಟ್ಟುಕೊಂಡು ನೀರನ್ನು ಪೋಲು ಮಾಡದೆ ಸದ್ಬಳಕೆ ಮಾಡಿಕೊಳ್ಳಬೇಕು,ಕೆರೆಗಳಲ್ಲಿ ನೀರು ತುಂಬಿದ್ದರೆ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ, ಇದರಿಂದ ಬೋರ್ವೆಲಗಳಿಗೆ ನೀರು ಹೆಚ್ಚಾಗುತ್ತದೆ, ನೀರನ್ನು ಕಲುಷಿತ ಮಾಡದೆ ಬಳಕೆ ಮಾಡಿದರೆ ಜಾನುವಾರುಗಳಿಗೆ ಸಮರ್ಪಕವಾಗಿ ನೀರು ದೊರೆಯುತ್ತದೆ”ಎಂದು ಹೇಳಿದರು.
ಬೈಲಹೊಂಗಲದ ಮೂರುಸಾವಿರ ಮಠದ ಪರಮಪೂಜ್ಯ ಶ್ರೀ ನೀಲಕಂಠ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸಿದ್ದರು, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕೌಜಲಗಿ ಸೇರಿದಂತೆ ಅನೇಕ ಗಣ್ಯರು, ಊರಿನ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.