UK Suddi
The news is by your side.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 6 ನೇ ಘಟಿಕೋತ್ಸವ.

ಬೆಳಗಾವಿ :ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 6 ನೇ ಘಟಿಕೋತ್ಸವ ಬುಧವಾರ ನಗರದ ವಿಟಿಯುನ ಮುಖ್ಯ ಸಭಾಂಗಣದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಪ್ರೊ. ವ್ಹಿ.ಎಸ್.ಚೌಹಾಣ ಅನುಪಸ್ಥಿಯಲ್ಲಿ ಆರ್‍ಸಿಯು ಕುಲಪತಿ ಪ್ರೊ.ಶಿವಾನಂದ ಹೊಸಮನಿ ಅವರು ಸಭಾಂಗಣದಲ್ಲಿ ನೇರದಿದ್ದ ಸಾವಿರಾರು ಜನ ಮುಂದೆ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

6ನೇ ಘಟಿಕೋತ್ಸವದಲ್ಲಿ 18 ಪಿ.ಹೆಚ್.ಡಿ ಪದವಿ, 8 ಸ್ನಾತಕ, 23 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಲಾಯಿತು.ವಿಭಿನ್ನ ವಿಷಯಗಳಲ್ಲಿ ಅತೀ ಹೆಚ್ಚು ಅಂಕ ಪಡೆದ 37 ವಿದ್ಯಾರ್ಥಿಗಳಿಗೆ ಚಿನ್ನದ ಪದಕ. ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ 176 ರ್ಯಾಂಕ್ ಪ್ರಮಾಣಪತ್ರಗಳನ್ನು ವಿದ್ಯಾರ್ಥಿಗಳಿಗೆ ಪ್ರಧಾನ ಮಾಡಲಾಯಿತು.

ಕುಲಸಚಿವ ಪ್ರೊ. ಸಿದ್ದು ಅಲಗೂರ, ಮೌಲ್ಯಮಾಪನ ಕುಲಸಚಿವ ಪ್ರೊ. ರಂಗರಾಜ ವನದುರ್ಗ, ಹಣಕಾಸು ಅಧಿಕಾರಿ ಪರಶುರಾಮ ದುಡಗುಂಟಿ, ಸಿಂಡಿಕೇಟ್ ಸದಸ್ಯರಾದ ರಾಜು ಚಿಕ್ಕನಗೌಡ್ರ, ಸುಧಾಗೌಡ,ಸರಜೂ ಕಾಟ್ಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Comments