UK Suddi
The news is by your side.

ದೇಶದ ಆರ್ಥಿಕ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ:ವಿಪಕ್ಷ ನಾಯಕ ಜಗದೀಶ್ ಶೆಟ್ಟರ್.

ಹುಬ್ಬಳ್ಳಿ:ಈ ಸಾಲಿನ ಬಜೆಟ್  ಅತ್ಯಂತ ಉತ್ತಮವಾದ ಬಜೆಟ್ ಆಗಿದ್ದು, ರೈತರು ಹಾಗೂ ಮಹಿಳಿಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶದ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ ಎಂದು ವಿಪಕ್ಷ ನಾಯಕ,ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಅರ್ಥಿಕ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ .ರೈತರಿಗೆ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.ಬಜೆಟ್ ನಲ್ಲಿ ಕೃಷಿಗೆ ಉತ್ತೇಜನ ನೀಡುವ ಅನೇಕ ಯೋಜನೆಗಳಿವೆ ಎಂದರು.
ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವದು ಒಂದು ಉತ್ತಮ ಯೋಜನೆಯಾಗಿದೆ. ಕೇಂದ್ರ ಸರ್ಕಾರ ರೈತರ ಪರವಾಗಿದೆ ಎನ್ನುವದಕ್ಕೆ ಈ ಬಜೆಟ್ ಸಾಕ್ಷಿಯಾಗಿದೆ,ಗ್ರಾಮ ಪಂಚಾಯತಿ ಹೈಟೆಕ್ ಮಾಡಲು ಯೋಜನೆ ಜಾರಿಗೆ ತರಲಾಗಿದೆ ಎಂದರು.
ಆರೋಗ್ಯ ವಿಮೆ ಹಾಗೂ ಗ್ರಾಮೀಣ  ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.  ಕರ್ನಾಟಕ ರಾಜ್ಯಕ್ಕೆ ಸಬರಮನ್ ರೈಲು ಯೋಜನೆಗೆ 17 ಸಾವಿರ ಕೋಟಿ ಹಣವನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

Comments