UK Suddi
The news is by your side.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಕಾಲಿಡುತ್ತಾರೆ ಎಂದರೆ ಸಿದ್ದರಾಮಯ್ಯ ಅವರಿಗೆ ಬಯ ಶುರುವಾಗುತ್ತೆ:ವಿಪಕ್ಷ ನಾಯಕ ಜಗದೀಶ್ ಶೆಟ್ಟರ್.

ಹುಬ್ಬಳ್ಳಿ:ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಾಜ್ಯಕ್ಕೆ ಕಾಲಿಡುತ್ತಾರೆಂದರೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಯ ಶುರುವಾಗುತ್ತದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.

ಫೆ 4ರಂದು ಬೆಂಗಳೂರಿನಲ್ಲಿ ಪರಿವರ್ತನಾ ಯಾತ್ರೆ ನಡೆಯಲಿದ್ದು, ದೇಶದ ಪ್ರದಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಈ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ನಡೆಯುವ ಪರಿವರ್ತನಾ ಯಾತ್ರೆಗೆ ಧಾರವಾಡ ಜಿಲ್ಲೆಯಿಂದ 10 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಧಾರವಾಡ ಗ್ರಾಮೀಣ ಭಾಜಪ ಜಿಲ್ಲಾಧ್ಯಕ್ಷರಾದ ಈರಣ್ಣ ಜಡಿ,ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Comments