UK Suddi
The news is by your side.

ಫೆಬ್ರವರಿ 16ರಂದು ರಾಜ್ಯ ಬಜೆಟ್

ಬೆಂಗಳೂರು: 2018-19ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆಬ್ರವರಿ 16ರಂದು ಮಂಡಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಡಿ.ಹೆಚ್ ಶಂಕರಮೂರ್ತಿ ಅವರು ಫೆಬ್ರವರಿ 16ರಂದು ಸಿದ್ದರಾಮಯ್ಯನವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಫೆಬ್ರವರಿ 5ರಿಂದ 9ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು 5ರಂದು ರಾಜ್ಯಪಾಲ ವಾಜೂಬಾಯ್ ವಾಲಾ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರದಲ್ಲಿರುವುದರಿಂದ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಭಾರೀ ಕುತೂಹಲ ಮೂಡಿಸಿದೆ.

Comments