ಬೆಳಗಾವಿ ಸ್ಮಾರ್ಟ್ ಸಿಟಿ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಡ್ಡಗಾಲು ಹಾಕುತ್ತಿದೆ:ಸಂಸದ ಸುರೇಶ ಅಂಗಡಿ ಆರೋಪ.
ಬೆಳಗಾವಿ: ಸ್ಮಾಟ್ ಸಿಟಿ ಯೋಜನೆಯಿಂದ ಮಹಾನಗರ ಅಭಿವೃದ್ಧಿಯಾಗುವುದರಿಂದ ಮೋದಿಗೆ ಹೆಸರು ಬರುತ್ತದೆ ಎಂದು ರಾಜ್ಯ ಸರ್ಕಾರ ಅಡ್ಡಗಾಲು ಹಾಕುತ್ತಿದೆ ಎಂದು ಸಂಸದ ಸುರೇಶ ಅಂಗಡಿ ಆರೋಪಿಸಿದರು.
ನಗರದ ಸರ್ಕಿಟ ಹೌಸನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬೆಳಗಾವಿ ನಗರವನ್ನು ಸ್ಮಾರ್ಟ್ ಸಿಟಿ ಎಂದು ಮೊದಲ ಹಂತದಲ್ಲಿ ಆಯ್ಕೆ ಮಾಡಿತ್ತು.ರಾಜ್ಯ ಸರ್ಕಾರ ಇದಕ್ಕೆ ಸಹಕರಿಸುತ್ತೀಲ್ಲ ಎಂದು ದೂರಿದರು.
ನಗರದಲ್ಲಿ 15 ದಿನಗಳಲ್ಲಿ ಪಾಸ್ ಪೋರ್ಟ್ ಕೇಂದ್ರವನ್ನು ಆರಂಭಿಸಲಾಗುವುದು.
ರಾಜ್ಯ ಸರ್ಕಾರ ನಗರದ ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರಿಡಲು ಬಜೆಟ್ ನಲ್ಲಿ ಅನುಮೋದನೆ ನೀಡಿದರೆ. ಚೆನ್ನಮ್ಮ ಹೆಸರು ಇಡಲು ಪ್ರಯತ್ನಿಸಲಾಗುವುದು ಎಂದರು.
ಬಜೆಟ್ ನಲ್ಲಿ ದೇಶದ 50 ಕೋಟಿ ಜನರಿಗೆ ಆರೋಗ್ಯ ರಕ್ಷಣೆ ನೀಡುವ ಸೇವೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಸಂಜಯ ಪಾಟೀಲ, ಮಹಾನಗರ ಬಿಜೆಪಿ ಅಧ್ಯಕ್ಷ ರಾಜೇಂದ್ರ ಹರಕುಣಿ, ಕಿರಣ ಜಾಧವ, ಅನಿಲ ಬೆನಕೆ, ಉಪಸ್ಥಿತರಿದ್ದರು.