ಇಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ರವರಿಂದ ಮಹಾಮಸ್ಥಕಾಭಿಷೇಕಕ್ಕೆ ಚಾಲನೆ
ಹಾಸನ: ಇಂದು ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಅವರು ಮೈಸೂರಿನಿಂದ ಬೆಳಿಗ್ಗೆ 10.20 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಶ್ರವಣಬೆಳಗೊಳಕ್ಕೆ ಆಗಮಿಸಲಿದ್ದಾರೆ. 10.45 ಕ್ಕೆ ಚಾವುಂಡರಾಯ ಸಭಾ ಮಂಟಪಕ್ಕೆ ರಾಷ್ಟ್ರಪತಿ ಆಗಮನವಾಗಲಿದೆ. 10.45 ರಿಂದ 11.45 ರವರೆಗೆ ರಾಷ್ಟ್ರಪತಿಯವರು ಮಹಾಮಸ್ತಕಾಭಿಷೇಕಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. 11.45ಕ್ಕೆ ಅಲ್ಲಿಂದ ರಾಷ್ಟ್ರಪತಿ ನಿರ್ಗಮಿಸಲಿದ್ದಾರೆ.
ಹೀಗಾಗಲೇ ಶ್ರವಣಬೆಳಗೊಳದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಕಾರ್ಯಕ್ರಮದ ಸಿದ್ದತೆ ಬಗ್ಗೆ ಪರಿಶೀಲಿಸಿದ್ದಾರೆ. ಜತೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಎಡಿಜಿಪಿ ಭಾಸ್ಕರ್ ರಾವ್ ಅವರು ಸಹ ಸಿದ್ದತೆ ಬಗ್ಗೆ ಪರಿಶೀಲನೆ ಮಾಡಿದ್ದಾರೆ.
ಒಟ್ಟು 10,000 ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ತ್ಯಾಗಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಇರಲಿದೆ.