UK Suddi
The news is by your side.

ಗದಗ:ಜೆಡಿಎಸ್‌ ಕಾರ್ಯಕಾರಿಣಿ ಸಭೆ

ಗದಗ: ಜಿಲ್ಲೆಯಲ್ಲಿ ಜೆಡಿಎಸ್‌ ಯುವ ಘಟಕವನ್ನು ಇನ್ನಷ್ಟು ಬಲಪಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಆಡಳಿತ, ರೈತ ವಿರೋಧಿ ನೀತಿ ಖಂಡಿಸಿ ಮುಂಬರುವ ದಿನಗಳಲ್ಲಿ ಎಲ್ಲ ತಾಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಯುವ ಘಟಕದ ಜಿಲ್ಲಾಧ್ಯಕ್ಷ ರಮೇಶ ಕಲಬುರ್ಗಿ ಹೇಳಿದರು.
ಜೆಡಿಎಸ್‌ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಯುವ ಘಟಕದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯ ನಿಟ್ಟಿನಲ್ಲಿ ಕಾರ್ಯತಂತ್ರ, ಚಟುವಟಿಕೆ ಬಗ್ಗೆ ವಿವರಿಸಿದರು. ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಪಿ.ವ್ಹಿ.ಪಾಟೀಲ ಮಾತನಾಡಿ, ರಾಜ್ಯದಲ್ಲಿ ಕುಮಾರಣ್ಣ ಅವರ ಪರ ಯುವಜನತೆಯ ಒಲವು ಹೆಚ್ಚಾಗುತ್ತಿರುವ ಲಕ್ಷಣಗಳು ಕಾಣುತ್ತಿವೆ ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್‌.ಪರ್ವತಗೌಡ್ರ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎಸ್‌.ಪಾಟೀಲ ಮಾತನಾಡಿ, ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮವನ್ನು ಗದಗ ಜಿಲ್ಲೆಯ ವಿವಿದೆಡೆ ಪ್ರಾರಂಭಿಸಲಾಗಿದೆ ಎಂದರು.

ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ರಾಮಣ್ಣ ಹೂವಣ್ಣವರ ಹಾಗೂ ಜಿಲ್ಲಾ ಹಿರಿಯ ಉಪಾಧ್ಯಕ್ಷ ಎಂ.ಎಸ್‌.ಸರ್ವಿ ಮಾತನಾಡಿ, ಕಾಂಗ್ರೇಸ್‌, ಬಿಜೆಪಿ ಈ ಎರಡೂ ರಾಷ್ಟೀಯ ಪಕ್ಷಗಳು ತಮ್ಮ ಸ್ವಹಿತಾಸಕ್ತಿಗೋಸ್ಕರ ಜನರನ್ನು ಬಲಿಪಶು ಮಾಡುತ್ತಿವೆ. ಕಳಸಾ ಬಂಡೂರಿ ವಿಷಯದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ನಾಟಕವಾಡುತ್ತಾ ಉತ್ತರ ಕರ್ನಾಟಕದ ಜನತೆಗೆ ಮೋಸ ಮಾಡುತ್ತಿವೆ. ಮುಂಬರುವ ದಿನಗಳಲ್ಲಿ ಇಂಥ ರೈತ ವಿರೋಧಿಗಳಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಕಾರ್ಯಕಾರಿಣಿ ಸಭೆಯಲ್ಲಿ ಗದಗ ತಾಲೂಕಾ ಅಧ್ಯಕ್ಷ ಬಸವರಾಜ ಅಪ್ಪಣ್ಣವರ ಸೇರಿದಂತೆ ವಿವಿದ ಪದಾಧಿಕಾರಿಗಳು ಪಾಲ್ಗೋಂಡಿದ್ದರು.

Comments