UK Suddi
The news is by your side.

ಹೊಸಪೇಟೆ: ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಿಂದ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ

ಹೊಸಪೇಟೆ: ತಾಲೂಕಿನ ಮಲಪನಗುಡಿಯಲ್ಲಿ ಜೆಡಿಎಸ್ ಪಕ್ಷದ ಕರ ಪತ್ರಗಳನ್ನು ಮನೆ ಮನೆಗೆ ಹಂಚುವ ಮೂಲಕ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಬಸಪ್ಪ ಮೆಡ್ಲೇರಿ, ಮನೆ ಮನೆಗೆ ತೆರಳಿ ಕರ ಪತ್ರವನ್ನು ಹಂಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  2018ರ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಈ ಬಾರಿ ಕುಮಾರಸ್ವಾಮಿಯವರು  ಚುನಾವಣಾ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ 10ಸಾವಿರ ವೇತನ, ಹಿರಿಯ ನಾಗರಿಕರಿಗೆ 5 ಸಾವಿರ ಪಿಂಚಣಿ, ಗರ್ಭೀಣಿ ಬಾಣಂತಿಯರು, ನಿರುದ್ಯೋಗ ಯುವಕರಿಗೆ ಉದ್ಯೋಗ ಸೇರಿದಂತೆ ರೈತರ, ನೇಕಾರರ, ಕುಶಲಕರ್ಮಿಗಳ ಎಲ್ಲಾ ರೀತಿಯ ಸಾಲಮನ್ನಾ ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ಅದಕ್ಕಾಗಿ ಮತದಾರರು ಜೆಡಿಎಸ್‍ಗೆ ಅವಕಾಶ ನೀಡಬೇಕು ಎಂದರು.

 

-ಮಂಜುನಾಥ್ ಅಯ್ಯಸ್ವಾಮಿ

Comments