ಹುಬ್ಬಳ್ಳಿ: ಸಿದ್ದರಾಮಯ್ಯ ಹಾಗು ಮಾಜಿ ಸಂಸದೆ ರಮ್ಯಾ ವಿರುದ್ದ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಮಾಜಿ ಸಂಸದೆ ರಮ್ಯಾ ವಿರುದ್ದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನ ಮಂತ್ರಿಗಳ ವಿರುದ್ದ ಅವಹೇಳನಕಾರಿ ಪೋಸ್ಟಗಳ ಹಾಕುತ್ತಿರುವ ಮಾಜಿ ಸಂಸದೆ ರಮ್ಯಾ ವಿರುದ್ದ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.