UK Suddi
The news is by your side.

ವಿಜಯಪುರ ಜಿಲ್ಲೆಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳ ವಿತರಿಸಿದ ಸಚಿವ ಡಾ.ಎಂ ಬಿ ಪಾಟೀಲ.

ವಿಜಯಪುರ:ಸಮಾಜ ಸೇವೆ, ಸಮುದಾಯ ಅಭಿವೃದ್ಧಿ, ಮಹಿಳಾ ಸಬಲೀಕರಣ, ಶಿಕ್ಷಣ ಅಭಿವೃದ್ಧಿಯಂತಹ ಹಲವಾರು ಸಮಾಜೋದ್ಧಾರಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ರಾಜ್ಯದ ಜಲಸಂಪನ್ಮೂಲ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ. ಎಂ.ಬಿ. ಪಾಟೀಲ ಅವರ ಹೆಸರಿನಲ್ಲಿ ಸ್ಥಾಪನೆಯಾಗಿರುವಂತಹ ಡಾ. ಎಂ.ಬಿ. ಪಾಟೀಲ ಫೌಂಡೇಷನ್ ವಿಜಯಪುರ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯನಿರ್ವಹಿಸುತ್ತಿದೆ.

ಇತ್ತೀಚೆಗೆ ಮಮದಾಪುರ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರು ಸಭಾ ಕಾರ್ಯಕ್ರಮದಲ್ಲಿ ತಮ್ಮ ಫೌಂಡೇಷನ್ ವತಿಯಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದರು.

ಇದೇ ರೀತಿ ತಮ್ಮ ಮತಕ್ಷೇತ್ರವಾದ ಬಬಲೇಶ್ವರದಲ್ಲಿಯೂ ಎಲ್ಲ ಸರ್ಕಾರಿ ಶಾಲೆಗಳಿಗೆ ಡಾ. ಎಂ.ಬಿ. ಪಾಟೀಲ ಫೌಂಡೇಷನ್ ವತಿಯಿಂದ ಕ್ರೀಡಾ ಸಾಮಗ್ರಿಗಳ ಕಿಟ್‍ಗಳನ್ನು ವಿತರಿಸಿದ್ದಾರೆ.

ಸಚಿವರ ಈ ಪ್ರೋತ್ಸಾಹವನ್ನು ಜಿಲ್ಲೆಯ ವಿದ್ಯಾರ್ಥಿಗಳೂ ಸೇರಿದಂತೆ ಎಲ್ಲರೂ ಪ್ರಶಂಸಿದ್ದಾರೆ.

Comments