ಮಿರ್ಚಿ ಬಜ್ಜಿ ಸವೆದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ.
ರಾಯಚೂರು:ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಯಚೂರು ಜಿಲ್ಲೆಯ ಕಲ್ಮಲಾದ ಅಂಗಡಿಯೊಂದರಲ್ಲಿ ಮಿರ್ಚಿ ಬಜ್ಜಿ ಸವಿದು ಖುಷಿಪಟ್ಟರು.
ಇದೇ ವೇಳೆ ಕಲ್ಮಾಲಾದ ಗ್ರಾಮಸ್ಥರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಅನೇಕ ಅಹವಾಲುಗಳನ್ನು ಹೇಳಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಾ॥ ಜಿ ಪರಮೇಶ್ವರ್,ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್ ಅವರು ಸೇರಿದಂತೆ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಜೊತೆಯಲ್ಲಿದ್ದರು.