UK Suddi
The news is by your side.

ಹುಬ್ಬಳ್ಳಿ: ನವಜಾತ ಶಿಶು ಸಾವು

ಸಾಂಧರ್ಭಿಕ ಚಿತ್ರ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನವಜಾತ ಶಿಶುವೊಂದು ವೈದ್ಯರ ಯಡವಟ್ಟಿನಿಂದ ಮೃತಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ.

ಜನ್ನತ್ ನಗರದ ಶಾಹೀದಾ ಸಲಿಂ ಅಹಮದ್ ಗೋಡೆಸವಾರ್ ಎಂಬ ಮಹಿಳೆ ಹೆರಿಗೆಯಾಗಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದರೆ ಸರಿಯಾಗಿ ಚಿಕಿತ್ಸೆ ನೀಡಲಿಲ್ಲ ಎಂದು ಮಹಿಳೆ ಸಂಬಂಧಿಗಳು ಆರೋಪಿಸುತ್ತಿದ್ದಾರೆ.

ಮಂಗಳವಾರ ಸಾಯಂಕಾಲ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಖಾಸಗಿ ಆಸ್ಪತ್ರೆ ವೈದ್ಯರು ಶಿಶುವನ್ನು ಕಿಮ್ಸ್ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ. ಆದರೆ ಕಿಮ್ಸ್ ವೈದ್ಯರು ಒಂದು ಗಂಟೆಯಾದ್ರು ಚಿಕಿತ್ಸೆ ನೀಡಿದೆ ನಿರ್ಲಕ್ಷ್ಯವಹಿಸಿದ್ದರಿಂದ ಮಗು ಸಾವನ್ನಪ್ಪಿದೆ ಎಂದು ಸಂಬಂಧಿಗಳು ಆರೋಪಿಸುತ್ತಿದ್ದಾರೆ.

ವೈದ್ಯರ ನಿರರ್ಲಕ್ಷ್ಯ ಧೋರಣೆಯಿಂದ ರೊಚ್ಚಿಗೆದ್ದ ಸಂಬಂಧಿಗಳು ಕಿಮ್ಸ್ ವೈದ್ಯರನ್ನು ತರಾಟೆಗೆ ತಗೆದುಕೊಂಡಿದ್ದಾರೆ.‌
ಆದ್ರೆ ಖಾಸಗಿ ಆಸ್ಪತ್ರೆಯ ವೈದ್ಯರು ಯಾಕೆ ಮಗುವನ್ನು ಕಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟರು ಎಂಬ ಅನುಮಾನ ಮೂಡುತ್ತಿದೆ. ಇದರಲ್ಲಿ ಯಾರ ವೈಫಲ್ಯವಿದೆ ಎಂಬುದರ ಬಗ್ಗೆ ತನಿಖೆ ನಡೆಯಬೇಕು ಎಂದು ಸಂಬಂಧಿಕರು ಒತ್ತಾಯಿಸಿದ್ದಾರೆ.

Comments