UK Suddi
The news is by your side.

ಜನಪರ ಮತ್ತು ಯಾರಿಗೂ ಹೊರೆಯಾಗದ ಬಜೆಟ್:ಶಾಸಕ ಸತೀಶ ಜಾರಕಿಹೊಳಿ.

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಜನಪರ ಮತ್ತು ಯಾರಿಗೂ ಹೊರೆಯಾಗದ ಬಜೆಟ್ ಎಂದು ಎಐಸಿಸಿ ಕಾರ್ಯದರ್ಶಿ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.
2018-19ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಕೃಷಿಗೆ ಆದ್ಯತೆ ನೀಡುವ ಜೊತೆಗೆ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಹೆಣ್ಣುಮಕ್ಕಳಿಗೆ ಉಚಿತ ಉನ್ನತ ಶಿಕ್ಷಣ, ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಕ್ಷೇಮ ನಿಧಿ, ಅಂತರ ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಹೆಚ್ಚಳ ಪ್ರಕಟಿಸಿದ್ದಾರೆ. ಬೆಳಗಾವಿಯಲ್ಲಿ ತ್ರಿ ಡಿ ತಾರಾಲಯ, ಹೆಣ್ಣುಮಕ್ಕಳಿಗೆ ಧಾರವಾಡ ಮತ್ತು ಬೆಂಗಳೂರಿನಲ್ಲಿ ಭಾರಿ ವಾಹನ ಚಾಲನೆ ತರಬೇತಿ ಕೇಂದ್ರ, ಬೆಂಗಳೂರಿನ ದೇವನಹಳ್ಳಿಯಲ್ಲಿ ವಾಲ್ಮೀಕಿ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಸ್ಥಾಪನೆ, ಮೈಸೂರು ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಕೇಂದ್ರ ಸ್ಥಾಪನೆ ಹೀಗೆ ಹಲವು ಜನಪರ, ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಇದೊಂದು ಅತ್ಯುತ್ತಮವಾದ ಬಜೆಟ್ ಎಂದು ಅವರು ಪ್ರಶಂಸಿಸಿದ್ದಾರೆ.

Comments