ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥೀಕರಣ ಕಾಮಗಾರಿಗಳಿಗೆ ಚಾಲನೆ ನೀಡಿದ:ಕೇಂದ್ರ ಸಚಿವ ನಿತಿನ್ ಗಡ್ಕರಿ.
ಶಿವಮೊಗ್ಗ:ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ, ಮತ್ತು ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥೀಕರಣ ಕಾಮಗಾರಿಗಳಿಗೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಶಂಕು ಸ್ಥಾಪನೆ ಮಾಡಿದರು. ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರು ಕಾರ್ಯಕ್ರಮವನ್ನು ಉದ್ಘಾಟಿಸುವುದರ ಮೂಲಕ 7,000 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಸಿಗಂದೂರು ಸೇತುವೆ ನಿರ್ಮಾಣಕ್ಕಾಗಿ ನನ್ನ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ನಿತಿನ್ ಗಡ್ಕರಿಯವರು ಅನುಮೋದನೆ ನೀಡಿರುವುದು ಈ ಭಾಗದ ಜನತೆಯಲ್ಲಿ ಅತೀವ ಸಂತಸವನ್ನು ತಂದಿದೆ. ಇದರಿಂದ ಲಕ್ಷಾಂತರ ಜನರಿಗೆ ಉಪಯೋಗವಾಗಲಿದೆ. ಈ ಜನೋಪಕಾರಿ ಕಾರ್ಯದಿಂದ ಕರ್ನಾಟಕದ ಪರಿವರ್ತನೆಗೆ ತಾವು ಬದ್ಧರಾಗಿದ್ದೇವೆಂಬ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಕಾಗೋಡು ತಿಮ್ಮಪ್ಪ, ಬಿ.ವೈ.ರಾಘವೇಂದ್ರ, ರುದ್ರೇ ಗೌಡ, ಆಯನೂರು ಮಂಜುನಾಥ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.