ಮೋದಿಯವರ ಸುಳ್ಳು ಮಾತುಗಳಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ:ಸತೀಶ ಜಾರಕಿಹೊಳಿ.
ಬೆಳಗಾವಿ:ನರೇಂದ್ರ ಮೋದಿಯವರ ಸುಳ್ಳು ಮಾತುಗಳಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರ ಅಪಾರ ಜನರ ಬೆಂಬಲ ಹೊಂದಿದೆ ಎಂದು ಎಐಸಿಸಿ ಕಾರ್ಯದರ್ಶಿ, ಶಾಸಕ ಸತೀಶ ಜಾರಕಿಹೊಳಿ ಪ್ರಧಾನಿ ಮೋದಿಯ ಕಮಿಷನ್ ಸರ್ಕಾರ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಾಕಷ್ಟು ಜನಪರ ಯೋಜನೆಗಳ ಮುಖಾಂತರ ಅಪಾರ ಜನರ ಬೆಂಬಲ ಹೊಂದಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷದಲ್ಲಿ ಅನೇಕ ಜನಪರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದ್ದರಿಂದ ರಾಜ್ಯದ ಜನರು ನಮ್ಮ ಜೊತೆಯಲ್ಲಿದ್ದಾರೆ ಎಂದು ಹೇಳಿದರು.
ಪ್ರಧಾನಿ ಮೋದಿ, ಅಮಿತ ಶಾ ಅವರ ಸುಳ್ಳು ಭಾಷಣದಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ಪ್ರಧಾನಿ ಮೋದಿ ಅವರ ಹೇಳಿಕೆಗೆ ತೀರುಗೇಟು ನೀಡಿದರು.