ಶಿವಾಜಿ ಜಯಂತಿ ಆಚರಿಸದಿರುವುದನ್ನು ಖಂಡಿಸಿ ಮರಾಠಾ ಸಮಾಜದ ಮುಖಂಡರಿಂದ ಪ್ರತಿಭಟನೆ
ಧಾರವಾಡ: ರಾಜ್ಯ ಸರ್ಕಾರವೇ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸುವಂತೆ ಸುತ್ತೋಲೆ ಹೊರಡಿಸಿದ್ದರೂ ಕೂಡ ಜಿಲ್ಲೆ ಕೆಲಸ ಸರ್ಕಾರಿ ಕಚೇರಿಗಳಲ್ಲಿ ಶಿವಾಜಿ ಜಯಂತಿ ಆಚರಿಸದೇ ಹಿಂದೂ ಸ್ರಾಮಾಟ್ನನ್ನು ಅಪಮಾನ ಮಾಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮರಾಠ ಸಮಾಜದ ವತಿಯಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎನ್.ಬಿ.ಶೂರಪಾಲಿ, ಪಾಲಿಕೆ ಸದಸ್ಯ ರಾಜು ಅಂಬೋರೆ, ಮರಾಠ ಸಮಾಜದ ಮುಖಂಡ ಭೀಮಪ್ಪ ಕಸಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ನಿನ್ನೆ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಕೆಲ ಸರ್ಕಾರಿ ಕಚೇರಿಗಳಲ್ಲಿ ಆಚರಿಸಿಲ್ಲ ಎಂಬ ಮಾಹಿತಿ ಬಂದಿದೆ. ಅಂಥ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಬೇಕು. ಬರುವ ದಿನಗಳಲ್ಲಿ ಎಲ್ಲ ಸರ್ಕಾರಿ ಕಚೇರಿ, ಶಾಲಾ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸುವಂತೆ ಸೂಚಿಸಬೇಕು ಎಂದು ಆಗ್ರಹಿಸಿದರು.