UK Suddi
The news is by your side.

ಧಾರವಾಡ:ಮಾರ್ಚ 3 ರಂದು ಮೇಯರ್, ಉಪಮೇಯರ್ ಚುನಾವಣೆ.

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 20ನೇ ಅವಧಿಗೆ ಮಹಾಪೌರ ಮತ್ತು ಉಪಮಹಾಪೌರ ಹುದ್ದೆಗಳಿಗೆ ಮಾರ್ಚ 3 ರಂದು ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.
ಪಾಲಿಕೆಯ ಸಭಾಗೃಹದಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ನಾಮಪತ್ರಗಳನ್ನು ಸ್ವಿಕರಿಸಲಾಗುವುದು. ಮಧ್ಯಾಹ್ನ 1 ಗಂಟೆಯ ನಂತರ ಚುನಾವಣಾ ಪ್ರಕ್ರಿಯೆ ಆರಂಭವಾಗುವುದು. ಮಹಾಪೌರರ ಸ್ಥಾನವು ಸಾಮಾನ್ಯ ವರ್ಗಕ್ಕೆ, ಉಪಮಹಾಪೌರ ಸ್ಥಾನವು ಹಿಂದುಳಿದ “ಅ” ವರ್ಗಕ್ಕೆ ಮೀಸಲಾಗಿದೆ ಎಂದು ಚುನಾವಣೆಯ ಅಧ್ಯಕ್ಷಾಧಿಕಾರಿಗಳೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments