UK Suddi
The news is by your side.

ಜಾಮಿನು ಅರ್ಜಿ ತಿರಸ್ಕರಿಸಿದ ಕೋರ್ಟ್; ಮೊಹಮ್ಮದ್ ನಲಪಾಡ್ಗೆ ಜೈಲೂಟವೇ ಗತಿ

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಜಾಮೀನು ಅರ್ಜಿಯನ್ನ ಬೆಂಗಳೂರಿನ 63ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಹೀಗಾಗಿ, ಇನ್ನೂ ಕೆಲವು ದಿನ ನಲಪಾಡ್ ಮತ್ತವನ ಸಹಚರರಿಗೆ ಜೈಲುಟ  ಗತಿಯಾಗಿದೆ.

ಪ್ರಕರಣ ಸಂಬಂಧ 63ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆದಿತ್ತು. ವಿದ್ವತ್ ಪರ ವಕೀಲ ಶ್ಯಾಮ್ ಸುಂದರ್ ಅವರು ನಲಪಾಡ್ ಗೆ ಜಾಮೀನು ನೀಡದಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ನಲಪಾಡ್ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ನೀಡುವಂತೆ ನ್ಯಾಯಧೀಶರಲ್ಲಿ ಮನವಿ ಮಾಡಿದರು.

ಇಂದು ನ್ಯಾಯಾಧೀಶರು ಆದೇಶವನ್ನು ಪ್ರಕಟಿಸಿದ್ದು ಮೊಹಮ್ಮದ್ ನಲಪಾಡ್ ಸೇರಿದಂತೆ ಇತರ 6 ಮಂದಿ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ. ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಇದೊಂದು ಗಂಭೀರ ಪ್ರಕರಣವಾಗಿದೆ. ಹಲ್ಲೆ ನಂತರ ಆರೋಪಿಗಳು ಆಸ್ಪತ್ರೆಯವರೆಗೂ ಹೋಗಿ ಅಲ್ಲಿ ದಾಂದಲೆ ನಡೆಸಿರುವುದು ಗಂಭೀರ ವಿಚಾರವಾಗಿದೆ. ಇದನ್ನೆಲ್ಲಾ ಮನಗಂಡು ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷ್ಯ ನಾಶ ಮಾಡುವ ಸಂಭವ ಇರುವುದರಿಂದ ಆರೋಪಿಗಳಿಗೆ ಜಾಮೀನು ನಿರಾಕರಣೆ ಮಾಡಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.

Comments