UK Suddi
The news is by your side.

ಗುರುರಾಜ ಹುಣಸಿಮರದ ಸೇರಿದಂತೆ ಇತರರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಬೆಲ್ಲದ

ಧಾರವಾಡ: ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ, ಜಿಲ್ಲಾ ಪ್ರಭಾರ ಅಧ್ಯಕ್ಷ ಹಾಗೂ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಹಾಗೂ ಪ್ರೊ.ವಿ.ಸಿ.ಸವಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಉದ್ಯಮಿ ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಶಿವಣ್ಣ ಬೆಲ್ಲದ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ ಮುಂದಿಟ್ಟುಕೊಂಡು ತೇಜೋವಧೆ ಮಾಡುವ ಕೆಲಸ ಮಾಡಿದ್ದಾರೆ. ಇದು ಸರಿಯಾದ ಬೆಳವಣಿಗೆ ಅಲ್ಲ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಅಖಿಲ ಭಾರತ ವೀರಶೈವ ಮಹಾಸಭಾ ಕುರಿತ ತಕರಾರು ಈಗಾಗಲೇ ನ್ಯಾಯಾಲಯದಲ್ಲಿದ್ದರೂ, ನನ್ನ ಮೇಲಿಯೇ ಅನಗತ್ಯ ಸುಳ್ಳು ಆರೋಪ ಮಾಡುವ ಮೂಲಕ ಬೆಲ್ಲದ ಕುಟುಂಬದ ಚಾರಿತ್ರ್ಯ ಹರಣ ಮಾಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ನ್ಯಾಯಾಲಯದಲ್ಲಿಯೇ ತಕ್ಕ ಉತ್ತರ ನೀಡಲಾಗುವುದು ಎಂದು ಶಿವಣ್ಣ ಬೆಲ್ಲದ ಗುಡುಗಿದರು.

ದುರುದ್ದೇಶ ಪೂರ್ವಕವಾಗಿ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ, ಜಿಲ್ಲಾ ಪ್ರಭಾರ ಅಧ್ಯಕ್ಷ ಹಾಗೂ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಹಾಗೂ ಪ್ರೊ.ವಿ.ಸಿ.ಸವಡಿ ಅವರು ಕೈಬಿಡಬೇಕು. ವಿದ್ಯಾವರ್ಧಕ ಸಂಘದ ಪ್ರಬುದ್ಧ ಮತದಾರರು ಈ ಬಗ್ಗೆ ಹೆಚ್ಚಿನ ಮಹತ್ವ ನೀಡಬಾರದು ಎಂದು ಮನವಿ ಮಾಡಿದ್ದಾರೆ.

Comments