UK Suddi
The news is by your side.

‘ಕೈ’ ಹಿಡಿದ ಅಶೋಕ್ ಖೇಣಿ.

ಬೆಂಗಳೂರು: ಬೀದರ್ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಹಾಗು ಮಾಜಿ ಸಚಿವರಾದ ಆರ್ ಎಲ್ ನಾಯಕ ಅವರು ಸೋಮವಾರ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಪಕ್ಷದ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಖೇಣಿ ಮತ್ತು ನಾಯಕ್ ಅವರಿಗೆ ಕಾಂಗ್ರೆಸ್ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಇದಕ್ಕೆ ಮೊದಲು ಖೇಣಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ನೈಸ್ ಸಂಸ್ಥೆಯ ಮುಖ್ಯಸ್ಥ ಖೇಣಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡ ಪರಮೇಶ್ವರ್, ಖೇಣಿ ಸೇರ್ಪಡೆಯಿಂದಾಗಿ ಬೀದರ್ ಜಿಲ್ಲಾ ಕಾಂಗ್ರೆಸ್‌ನಲ್ಲಿ ಬಲ ಬಂದಿದೆ ಎಂದಿದ್ದಾರೆ.

ಬೀದರ್ ದಕ್ಷಿಣ ಕ್ಷೇತ್ರದಿಂದ ಕರ್ನಾಟಕ ಮಕ್ಕಳ ಪಕ್ಷದಿಂದ ಅಶೋಕ್ ಖೇಣಿ ಅವರು 2013ರ ಚುನಾವಣೆಯಲ್ಲಿ ಸ್ಪರ್ದಿಸಿ ಜಯ ಗಳಿಸಿದ್ದರು.

ಈ ಸಂದರ್ಭಲ್ಲಿ ಇಂಧನ ಸಚಿವರಾದ ಡಿ ಕೆ ಶಿವಕುಮಾರ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಸಿ ಚಂದ್ರಶೇಖರ್ ಮತ್ತು ಶ್ರೀಮತಿ ಮೀನಾಕ್ಷಿ ಸಂಗ್ರಾಮ್ ಉಪಸ್ಥಿತರಿದ್ದರು

Comments