ಮಡದಿಯನ್ನು ಸಾರೋಟದಲ್ಲಿ ಕೂರಿಸಿ ಮೆರವಣಿಗೆ ಮಾಡಿದ ಜನಾರ್ದನ್ ರೆಡ್ಡಿ.
ಬಳ್ಳಾರಿ: ವಿಶ್ವ ಮಹಿಳಾ ದಿನಾಚರಣೆ ದೇಶದೆಲ್ಲೆಡೆ ವಿಭಿನ್ನವಾಗಿ ವಿಶಿಷ್ಟವಾಗಿ ಆಚರಣೆ ಮಾಡಿದರೆ, ಮಾಜಿ ಸಚಿವ ಜನಾರ್ದನರೆಡ್ಡಿ ತಮ್ಮ ಮೆಚ್ಚಿನ ಮಡದಿಯನ್ನು ಹೂವಿನಿಂದ ಅಲಂಕಾರ ಮಾಡಿದ ಸಾರೋಟದಲ್ಲಿ ಕೂರಿಸಿ ಸವಾರಿ ಮಾಡಿದ್ದಾರೆ.
ಮಹಿಳಾ ದಿನಾಚರಣೆಯಂದು ಸಾಧನೆ ಮಾಡಿದ ಮಹಿಳೆಯರಿಗೆ, ತಾಯಂದಿರಿಗೆ ಸನ್ಮಾನ ಮಾಡಿ ಪ್ರೀತಿಯ ಕಾಣಿಕೆಯನ್ನ ನೀಡ್ತಾರೆ. ಆದ್ರೆ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಸಾಧನೆಗೆ ಬೆಂಬಲವಾಗಿದ್ದ ಪತ್ನಿ ಲಕ್ಷ್ಮಿ ಅರುಣಾರನ್ನು ಹೂ ಅಲಂಕಾರ ಮಾಡಿದ ಸೈಕಲ್ ಸಾರೋಟದಲ್ಲಿ ಕೂರಿಸಿ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ವಿಶ್ವ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಣೆ ಮಾಡಿದರು.