UK Suddi
The news is by your side.

ನಾಳೆ TET ಪರೀಕ್ಷೆ….!!

ಚಿಕ್ಕೋಡಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 3 ತಾಲೂಕಾ ಕೇಂದ್ರಗಳಲ್ಲಿ ಒಟ್ಟು 23 ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ನಾಳೆ ಫೆ. 3 ರಂದು ನಡೆಸಲಾಗುತ್ತಿದೆ.

ಚಿಕ್ಕೋಡಿಯಲ್ಲಿ 13 ಪರೀಕ್ಷಾ ಕೇಂದ್ರಗಳು, ಹುಕ್ಕೇರಿಯಲ್ಲಿ 3 ಪರೀಕ್ಷಾ ಕೇಂದ್ರಗಳು ಹಾಗೂ ನಿಪ್ಪಾಣಿಯಲ್ಲಿ 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈಗಾಗಲೇ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ಜ. 31 ರಂದು ಜಿಲ್ಲಾಧಿಕಾರಿಗಳು ಎಲ್ಲ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಪೂರ್ವ ಭಾವಿ ಸಭೆ ನಡೆಸಿ, ಪರೀಕ್ಷಾ ಪಾವಿತ್ರತ್ಯೆಯ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ 144 ಕಲಂ ನಿಷೇಧಾದಜ್ಞೆ ಹಾಗೂ ಝರಾಕ್ಸ ಅಂಗಡಿಗಳನ್ನು ಮುಚ್ಚಲು ಆದೇಶ ನೀಡಲಾಗಿದೆ.

ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳು ಬೆಳಗಾವಿ ಹಾಗೂ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಟಾಧಿಕಾರಿಗಳು ಚಿಕ್ಕೋಡಿ ಇವರು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೋಲಿಸ್ ಸಿಬ್ಬಂದಿಯವರನ್ನು ನೇಮಿಸುವ ಕ್ರಮವನ್ನು ಕೈಕೊಂಡಿರುತ್ತಾರೆ. ಕಚೇರಿಯಿಂದ 7 ಮಾರ್ಗಾಧಿಕಾರಿಗಳನ್ನು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಸ್ಥಾನಿಕ ವಿಚಕ್ಷಕ ದಳದ ಅಧಿಕಾರಿಯನ್ನು ನೇಮಿಸಿ ಈಗಾಗಲೇ ಆದೇಶಿಸಲಾಗಿದೆ.

ಪರೀಕ್ಷೆಗಳು ಫೆ. 3 ರಂದು ಮುಂಜಾನೆ 9.30 ಗಂಟೆಯಿಂದ 12.00 ಗಂಟೆಯವರೆಗೆ ಪೇಪರ-1, 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಮಧ್ಯಾಹ್ನ 2.00 ಗಂಟೆಯಿಂದ 4.30 ಗಂಟೆಯವರಗೆ ಪೇಪರ-2, 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಪ್ರಾರಂಭಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಕೊಠಡಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಪರೀಕ್ಷಾ ಪ್ರಾರಂಭದ ಅವಧಿಯ ನಂತರ ಯಾವುದೇ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಪ್ರವೇಶವನ್ನು ನೀಡಲಾಗುವುದಿಲ್ಲ.

ಚಿಕ್ಕೋಡಿ ಶೈಕ್ಷಣಿಕ ವಲಯದ ಈ ಪರೀಕ್ಷಾ ಉಸ್ತುವಾರಿಯನ್ನು ಉಪವಿಭಾಗಾಧಿಕಾರಿಗಳು ಚಿಕ್ಕೋಡಿ ಇವರು ನಿರ್ವಹಿಸಲಿದ್ದಾರೆ. ಪರೀಕ್ಷಾರ್ಥಿಗಳು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಶಿಕ್ಷಣಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿ ಎ. ಸಿ. ಗಂಗಾಧರ ಇವರ ಮೊ. ನಂಬರ 8762510800 ಮತ್ತು 08338-272918 ನ್ನು ಸಂಪರ್ಕಿಸಬಹುದಾಗಿದೆ ಎಂದು ಡಿಡಿಪಿಐ ಎಂ.ಜಿ.ದಾಸರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments