UK Suddi
The news is by your side.

ವಿಧಾನಸೌಧದ ಮೊದಲನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್.

ಬೆಂಗಳೂರು:ವಿಧಾನಸೌಧದಲ್ಲಿ ಶಾರ್ಟ್ ಸರ್ಕ್ಯೂಟ್ ‍ನಿಂದ ಕೆಲಹೊತ್ತು ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.

ವಿಧಾನಸೌಧದ ಮೊದಲ ಮಹಡಿಯ ವಿರೋಧ ಪಕ್ಷದ ಮುಖ್ಯ ಸಚೇತಕ ವಿ.ಸುನೀಲ್‍ಕುಮಾರ್ ಅವರ ಕೊಠಡಿಯ ಸ್ವಿಚ್ ಬೋರ್ಡ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆ ನಡೆದ ತಕ್ಷಣ ವಿಧಾನಸೌಧದ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು,ಯಾವುದೇ ಅವಘಡ ಸಂಭವಿಸಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ.

Comments