UK Suddi
The news is by your side.

ಧಾರವಾಡ ಮುರುಘಾಮಠಕ್ಕಿಂದು ಸಿಎಂ ಕುಮಾರಸ್ವಾಮಿ ಭೇಟಿ.

ಧಾರವಾಡ:ಮುಖ್ಯಮಂತ್ರಿಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಫೆಬ್ರವರಿ 9 ರಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಫೆಬ್ರವರಿ 9ರಂದು ಸಂಜೆ 4 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು,ಸಂಜೆ 5 ಗಂಟೆಗೆ ಶ್ರಿ ಮುರುಘಾಮಠದ ಶಿವಾನುಭವ ಮಂಟಪದಲ್ಲಿ ಆಯೋಜಿಸಿರುವ ಶ್ರಿಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 6.30ಕ್ಕೆ ವಿಶೆಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಧಿಕಾರಿ ಹಾಗೂ ಪದನಿಮಿತ್ತ ಉಪ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments