UK Suddi
The news is by your side.

ನನ್ನನ್ನು ಏನು ಮಾಡೋಕು ಆಗಲ್ಲ ಗಾಳಿ ಸುದ್ದಿಗೆ ಕಿವಿಗೊಡಬೇಡಿ: ಯಶ್ ಸ್ಪಷ್ಟನೆ

ಬೆಂಗಳೂರು: ನನ್ನ ಹತ್ಯೆ ವಿಚಾರ ಕೇವಲ ಊಹಾಪೋಹ ಅಂತ ರಾಕಿಂಗ್ ಸ್ಟಾರ್ ಯಶ್ ಅವರು ಹೇಳಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಯಶ್ ಅವರು, ನನಗೆ ಯಾವುದೇ ಬೆದರಿಕೆ ಬಂದಿಲ್ಲ ಅಂತ ಸ್ಪಷ್ಟ ಪಡಿಸಿದ್ದು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸುದ್ದಿಗೆ ಫುಲ್ ಸ್ಟಾಪ್ ಹಾಕಿದ್ದಾರೆ.

ಸುದ್ದಿ ಬಗ್ಗೆ ಪ್ರತಿಕ್ರಿಯಿಸಿ,”ಯಾರೋ ಬೇಕಂತಲೇ ಸುದ್ದಿ ಹರಿಬಿಡ್ತಿದ್ದಾರೆ. ಪದೇ ಪದೇ ನನ್ನ ಹೆಸರು ಪ್ರಸ್ತಾಪಿಸ್ತಿದ್ದಾರೆ. ಇದರ ಬಗ್ಗೆ ಸ್ಪಷ್ಟನೆ ನೀಡಲು ಸುದ್ದಿಗೋಷ್ಠಿ ಕರೆದಿದ್ದೇನೆ. ನಿಮಗೆ ಸುದ್ದಿ ಕೊಟ್ಟವರು ಯಾರು? ಪ್ರತೀ ಬಾರಿ ನನ್ನ ಹೆಸರು ಪ್ರಸ್ತಾಪಿಸಿದ್ದಕ್ಕೆ ನೋವಾಗ್ತಿದೆ. ನನ್ನನ್ನು ಏನು ಮಾಡೋಕು ಆಗಲ್ಲ. ಗಾಳಿ ಸುದ್ದಿಗೆ ಕಿವಿಗೊಡಬೇಡಿ” ಅಂತ ಯಶ್ ಮನವಿ ಮಾಡಿದ್ದಾರೆ.

ಸ್ಯಾಂಡಲ್ ವುಡ್ ನಟನ ಮೇಲೆ ಕೊಲೆ ಯತ್ನ ನಡೆದಿದೆ ಅನ್ನೋ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಹೆಸರೂ ಕೇಳಿ ಬಂದಿತ್ತು. ಈ ಕುರಿತು ಯಶ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

Comments