UK Suddi
The news is by your side.

ವಾಟ್ಸಾಪ್ ಗ್ರೂಪ್ ಗಳಲ್ಲಿ ಚುನಾವಣಾ ಪ್ರಚಾರ ಮಾಡಿದ್ರೆ ಅಡ್ಮಿಗೆ ಬೀಳುತ್ತೆ FIR..!!

ಬೆಂಗಳೂರು: ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಆದ ಬಳಿಕ ಸಾಮಾಜಿಕ ಜಾಲತಾಣದ ಬಗೆಗೆ ಚುನಾವಣಾ ಆಯೋಗ ಮಹತ್ವದ ನಿರ್ಧಾರ ಒಂದನ್ನು ತೆಗೆದುಕೊಂಡಿದೆ.

ಇನ್ನೂ ಮುಂದೆ ನಿಮ್ಮ ವಾಟ್ಸಾಪ್ ಗ್ರೂಪ್ ಗಳಲ್ಲಿ ಚುನಾವಣಾ ಪ್ರಚಾರಕ್ಕೆ ಆಯೋಗ ಕಟ್ಟುನಿಟ್ಟಿನ ನಿರ್ಬಂಧ ಹಾಕಿದೆ. ಒಂದು ವೇಳೆ ನೀವೆನಾದರು ನಿಯಮ ಮೀರಿ ವಾಟ್ಸಾಪ್ ಗ್ರೂಪ್ ಗಳಲ್ಲಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟ್ ಹಾಕಿದರೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳ ಮೇಲೆ FIR ದಾಖಲಿಸಿ ಜೈಲಿಗೆ ಅಟ್ಟಲಾಗುತ್ತದೆ ಎಂದು ಆಯೋಗ ಖಡಕ್ ಎಚ್ಚರಿಕೆ ರವಾನಿಸಿದೆ.

ಆದ್ದರಿಂದ ಚುನಾವಣೆ ಮುಗಿಯೋ ವರೆಗೆ ವಾಟ್ಸಪ್ ಗ್ರೂಪ್ ಗಳಲ್ಲಿ ರಾಜಕೀಯ ಪಕ್ಷಗಳ ಹಾಗೂ ನಾಯಕರ ಕುರಿತ ಯಾವುದೇ ಪೋಸ್ಟ್ ಹಾಕದಿರಲು ನಿಮ್ಮ ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ.

Comments