UK Suddi
The news is by your side.

112 ಜನರಿಗೆ ಪದ್ಮಶ್ರೀ ಪ್ರಶಸ್ತಿ:ಖಾದರ್ ಖಾನ್ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ.

ದೆಹಲಿ:ನಟ ಖಾದರ್ ಖಾನ್‌ಗೆ ಮರಣೋತ್ತರ ಗೌರವವಾಗಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಖಾದರ್ ಖಾನ್ ತಮ್ಮ 81ನೇ ವಯಸ್ಸಿನಲ್ಲಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೃತಪಟ್ಟಿದ್ದರು.

ಇದೇ ವೇಳೆ ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ರಾಷ್ಟ್ರಪತಿ ಕೋವಿಂದ್‌ರಿಂದ ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದರು,ಹಾಗೆಯೇ ಪ್ರಭುದೇವ ಹಾಗೂ ಶಂಕರ್ ಮಹದೇವನ್ ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ.

ವರ್ಷಾರಂಭದಲ್ಲಿ 112 ಜನರಿಗೆ ಪದ್ಮ ಪ್ರಶಸ್ತಿ ಘೋಷಿಸಲಾಗಿದ್ದು, ಈ ಪೈಕಿ 56 ಮಂದಿ ಪ್ರಶಸ್ತಿ ಸ್ವೀಕರಿಸಿದರು.

Comments