UK Suddi
The news is by your side.

ಕಪ್ಪತಗುಡ್ಡಕ್ಕೂ ಆವರಿಸಿದ ಬೆಂಕಿ: ಅಪಾರ ಪ್ರಮಾಣದ ಔಷಧಿ ಸಸ್ಯಗಳು ಬೆಂಕಿಗಾಹುತಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಹೆಸರುವಾಸಿಯಾಗಿರುವ ಕಪ್ಪತಗುಡ್ಡಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಔಷಧಿ ಸಸ್ಯಗಳು ನಾಶವಾಗಿವೆ.

ರವಿವಾರ ಸಂಜೆ ಕಾಣಿಸಿಕೊಂಡ ಬೆಂಕಿಯನ್ನು ತಹಬದಿಗೆ ತರಲು ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿಯಿಡೀ ಹರಸಾಹಸಪಟ್ಟು, ಕೊನೆಗೆ ಬೆಂಕಿ‌ ನಂದಿಸುವಲ್ಲಿ ಯಶಸ್ವಿಯಾದರು.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದ ಬಳಿ ಈ ಬೆಂಕಿ ಕಾಣಿಸಿಕೊಂಡಿತ್ತು ಎಂದು ಸ್ಥಳಿಯರು ತಿಳಿಸಿದ್ದಾರೆ.

ಬಿಸಿಳಿನ ತಾಪಕ್ಕೆ ಬೆಂಕಿ ತಗುಲಿರಬೇಕು ಎಂದು ಎಂದು ಶಂಕಿಸಲಾಗಿದೆ. ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Comments