UK Suddi
The news is by your side.

ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ:ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಬೆಂಗಳೂರು:ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು,ಕಳೆದೊಂದು ವರ್ಷದಿಂದ ಡಯಲಸಿಸ್ ಮಾಡಿಸಿಕೊಳ್ಳುತ್ತಿದ್ದರು ಆದರೆ ಈಗ ಮೊದಲಿಗಿಂತ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮಾತೆ ಮಹಾದೇವಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು,ಗುಣಪಡಿಸಲು ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದಾರೆ.

Comments