UK Suddi
The news is by your side.

ಧಾರವಾಡ ಲೋಕಸಭಾ ಚುನಾವಣೆ ಹಿನ್ನೊಟ ಕೈಪಿಡಿ ಬಿಡುಗಡೆ.

ಹುಬ್ಬಳ್ಳಿ:ಧಾರವಾಡ ಲೋಕಸಭಾ ಕ್ಷೆತ್ರಕ್ಕೆ 1952 ರಿಂದ 2014 ರವರೆಗೆ ನಡೆದ ಒಟ್ಟು 16 ಚುನಾವಣೆಗಳ ಮತದಾರರು,ಮತದಾನದ ಪ್ರಮಾಣ, ವಿಜೇತ ಹಾಗೂ ಸ್ಪರ್ಧಿಸಿದ ಅಭ್ಯರ್ಥಿಗಳು ಗಳಿಸಿದ ಮತಗಳ ವಿವರಗಳೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.

ಮಿನಿವಿಧಾನಸೌಧದ ಸಭಾಂಗಣದಲ್ಲಿ ಗುರುವಾರದಂದು ಜಿಲ್ಲಾಡಳಿತ, ಹುಬ್ಬಳ್ಳಿ ತಹಸೀಲ್ದಾರ ಕಾರ್ಯಾಲಯ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಿದ್ದ ಮಾಧ್ಯಮ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಲೋಕಸಭಾ ಚುನಾವಣೆ ಹಿನ್ನೊಟ ಕೈಪಿಡಿ ಬಿಡುಗಡೆ ಮಾಡಿದರು.

ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಪ್ರಾತ್ಯಕ್ಷಿಕೆ;

ಇದೆ ವೇಳೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಮೂಲಕ ಮತ ಚಲಾಯಿಸುವ ವಿಧಾನ ಹಾಗೂ ಮತದಾನದ ದೃಢೀಕರಣವನ್ನು ಮಾಡಿಕೊಳ್ಳುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ವಿವರಗಳನ್ನು ನೀಡಲಾಯಿತು. ನೇರವಾಗಿ ಪ್ರಾತ್ಯಕ್ಷಿಕೆ ಮೂಲಕ ಅಣುಕು ಮತದಾನ ಮಾಡುವ ಕಾರ್ಯ ಜರುಗಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತ, ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಶಕೀಲ್ ಅಹ್ಮದ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ. ಡೊಳ್ಳಿನ, ಹುಬ್ಬಳ್ಳಿ ಶಹರ ತಹಸೀಲ್ದಾರ ಶಶಿಧರ ಮಾಡ್ಯಾಳ, ಗ್ರಾಮೀಣ ತಹಶೀಲ್ದಾರ ಸಂಗಪ್ಪ ಬಾಡಗಿ, ಪ್ರೊಬೇಷನರಿ ಡಿವೈಎಸ್‌ಪಿ ಶರಣಪ್ಪ ಗೌರಿಪುರ, ಸ್ವಿಪ್ ಸಮಿತಿಯ ರಿಜ್ವಾನ್ ಅಹ್ಮದ್, ರಮೇಶ ನೂಲ್ವಿ, ಪ್ರೊ.ಪ್ರಸನ್ನ ಪಂಢರಿ ಮತ್ತಿತರರು ಉಪಸ್ಥಿತರಿದ್ದರು.

Comments