UK Suddi
The news is by your side.

ಉ.ಕ ಭಾಗದಲ್ಲಿ 40 ಡಿಗ್ರಿ ತರುಪಿದ ತಾಪಮಾನ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಎಚ್ಚರಿಕೆ..!

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಖರತೆ ಹೆಚ್ಚುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ತಾಪಮಾನ ಸಹಿಸಲಸಾಧ್ಯವಾದಷ್ಟು ಅಧಿಕವಾಗುತ್ತಿದ್ದು, ಜನ ಮನೆಯಿಂದ ಹೊರಬರಲೇ ಹಿಂದೇಟು ಹಾಕುತ್ತಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 38ರಿಂದ 40 ಡಿಗ್ರಿವರೆಗೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಹೆಚ್ಚಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಸಾರ್ವಜನಿಕರು ಆರೋಗ್ಯ ರಕ್ಷ ಣೆಗೆ ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಅಪ್ಪಾಸಾಬ ನರಟ್ಟಿ ಸಲಹೆ ನೀಡಿದ್ದಾರೆ.

ಸಡಿಲವಾದ ಹತ್ತಿಯ ಬಟ್ಟೆ ಧರಿಸಬೇಕು. ಉಪ್ಪು-ಸಕ್ಕರೆ ಮಿಶ್ರಿತ ನೀರು, ಹಣ್ಣಿನ ರಸ, ಮಜ್ಜಿಗೆ, ಎಳನೀರು ಸೇರಿದಂತೆ ಹೆಚ್ಚು ದ್ರವ ಪದಾರ್ಥಗಳನ್ನು ಸೇವಿಸಬೇಕು. ಬೆಚ್ಚಗಿನ, ಮಸಾಲೆ ರಹಿತ, ಶುದ್ಧ ಸಾತ್ವಿಕ ಆಹಾರ ಸೇವಿಸಬೇಕು. ಚರ್ಮ ಕೆಂಪಗಾದರೆ, ಬೆವರಿನ ಪ್ರಮಾಣ ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘ ಕಾಲ ತೀವ್ರ ಉಸಿರಾಟವಿದ್ದಲ್ಲಿ ತುರ್ತಾಗಿ ವೈದ್ಯರನ್ನು ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Comments