UK Suddi
The news is by your side.

ಜೂನ್ ತಿಂಗಳಲ್ಲಿ ‘ಸ್ವಚ್ಚಮೇವ ಜಯತೆ’ ಆಂದೋಲನ.

ಧಾರವಾಡ: ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಜೂನ್ ತಿಂಗಳಲ್ಲಿ ಸ್ವಚ್ಛಮೇವ ಜಯತೆ ಆಂದೋಲನ ಆಯೋಜಿಸಿ ಸ್ವಚ್ಛತೆ ಅರಿವು ಮೂಡಿಸುವ ಹಾಗೂ ಜಿಲ್ಲೆಯಲ್ಲಿ ಒಂದು ಲಕ್ಷ ಸಸಿ ನೆಡುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದರು.
ಅವರು ಮಂಗಳವಾರ ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಸ್ವಚ್ಛಮೇವ ಜಯತೆ ಆಂದೋಲನ ಹಾಗೂ ಪರಿಸರ ದಿನಾಚರಣೆ ಆಚರಿಸುವ ಕುರಿತು ಮಾತನಾಡಿದರು.

ಜೂನ್ 5ರಂದು ವಿಶ್ವ ಪರಿಸರ ದಿನವಾಗಿದ್ದು ಅಂದು ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ,ಶಾಲಾ ಕಾಲೇಜು ಆವರಣ ಸೇರಿದಂತೆ ವಿವಿಧೆಡೆ ಸುಮಾರು ಒಂದು ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ಅದಕ್ಕೆ ಅನುಗುಣವಾಗಿ ಎಲ್ಲಾ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಮತ್ತು ತಮಗೆ ಅಗತ್ಯ ವಿರುವ ಸಸಿಗಳನ್ನು ಪಡೆಯಲು ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಸಬೇಕೆಂದು ಹೇಳಿದರು. ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಕನಿಷ್ಠ 1000 ಸಸಿಗಳನ್ನು ನೆಡಲು ತಾಲೂಕಾಮಟ್ಟದ ಅಧಿಕಾರಿಗಳು ಕ್ರಿಯಾ ಯೋಜನೆ ಮಾಡಿಕೊಳ್ಳಬೇಕು. ಗ್ರಾಮ ಪಂಚಾಯತ ಅಧಿಕಾರಿಗಳು ಕ್ರಿಯಾಶೀಲವಾಗಿ ತೂಡಗಿಸಿಕೊಳ್ಳಬೇಕೆಂದು ಹೇಳಿದರು.

ಸ್ವಚ್ಛತಾ ರಥ, ಸರಕಾರಿ ಕಚೇರಿ,ಕಟ್ಟಡ, ಶಾಲಾ ಆವರಣ ಗೋಡೆಗಳ ಮೇಲೆ ಬರಹ, ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಕರಪತ್ರಗಳ ವಿತರಣೆ, ತರಬೇತಿ ಕಾರ್ಯಕ್ರಮಗಳು ಸೇರಿದಂತೆ ವಿವಿಧ ರೀತಿಯ ಮಾಹಿತಿ ,ಶಿಕ್ಷಣ ಹಾಗೂ ಸಂವಹನ ಕಾರ್ಯಚಟುವಟಿಕೆಗಳನ್ನು ಜೂನ್ ತಿಂಗಳ ಪೂರ್ತಿ ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಎ.ಎಂ.ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಾ.ರಾಮಚಂದ್ರ ಮಡಿವಾಳರ, ಧಾರವಾಡ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್. ಖಾದ್ರೊಳ್ಳಿ, ಹುಬ್ಬಳ್ಳಿ ಶಹರ ಕ್ಷೆÃತ್ರ ಶಿಕ್ಷಣಾಧಿಕಾರಿ ಎಸ್.ಸಿ ಕರಿಕಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

-Dharawad VB

Comments