UK Suddi
The news is by your side.

ಬರ ಪರಿಹಾರ ಕಾಮಗಾರಿಗಳಿಗೆ ಬಿಜೆಪಿ ಅಡ್ಡಿ:ಕೃಷ್ಣ ಬೈರೇಗೌಡ.

ಬೆಂಗಳೂರು: ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳಿಗೆ ಬಿಜೆಪಿ ಅಡ್ಡಿ ಮಾಡುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಗಂಭೀರವಾಗಿ ಆರೋಪಿಸಿದ್ದಾರೆ.

ಸರಕಾರ ಪ್ರಧಾನ ಕಾರ್ಯದರ್ಶಿ ಮಟ್ಟದಲ್ಲಿ ಬರ ಪರಿಹಾರ ಕಾಮಗಾರಿಗೆ ಸೂಚನೆ ನೀಡಿದೆ. ಆದರೆ, ಬಿಜೆಪಿಯವರು ಚುನಾವಣಾ ಆಯೋಗಕ್ಕೆ ದೂರು ನೀಡುವ ಮೂಲಕ ಕಾಮಗಾರಿಗಳಿಗೆ ಅಡ್ಡಿ ಉಂಟು ಮಾಡಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ.

ಚುನಾವಣಾ ಆಯೋಗ ಕೂಡ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ. ಸಾಲಮನ್ನಾ ಯೋಜನೆ ಅನುಷ್ಠಾನಕ್ಕೆ ತಡೆಯೊಡ್ಡಿರುವ ಚುನಾವಣಾ ಆಯೋಗ ಕೇಂದ್ರ ಸರಕಾರದ ರೈತ ಸಮ್ಮಾನ್ ನಿಧಿ ಯೋಜನೆಗೆ ಅನುಮತಿ ನೀಡಿದೆ. ಹೀಗಾದರೆ ಹೇಗೆ? ಎಂದು ಅವರು ಪ್ರಶ್ನಿಸಿದರು.

ಬಿಜೆಪಿಯು ಚುನಾವಣಾ ಆಯೋಗವನ್ನು ಬಳಸಿಕೊಂಡು ರಾಜ್ಯ ಸರಕಾರದ ಯೋಜನೆಗಳಿಗೆ ಅಡ್ಡಿ ಮಾಡಿ, ಬಳಿಕ ನಮ್ಮ ವಿರುದ್ಧವೇ ಆರೋಪಗಳನ್ನು ಮಾಡುತ್ತಿದೆ. ಚುನಾವಣಾ ಆಯೋಗದ ನೀತಿಯಿಂದಾಗಿ ಬರ ಪರಿಹಾರ ಕಾಮಗಾರಿ ವಿಳಂಬವಾಗಿದೆ ಎಂದು ಅವರು ಹೇಳಿದ್ದಾರೆ.

Comments